ಮಡಿಕೇರಿ ಫೆ.11 : ಭಾಗಮಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ, ರಸ್ತೆ, ಜಲ್ ಜೀವನ್ ಮಿಷನ್ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಇಂದು ಶಾಸಕ ಕೆ.ಜಿ.ಬೋಪಯ್ಯ ಶಂಕು ಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿದರು. ಗ್ರಾ.ಪಂ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು. ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.










