ಬೆಂಗಳೂರು ಫೆ.13 : ರಾಜಭವನದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಔತಣಕೂಟದಲ್ಲಿ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ಕೆಜಿಎಫ್ ರಾಕಿಭಾಯ್ ಯಶ್, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಚಲನಚಿತ್ರ ದಿಗ್ಗಜರು ಇಂದಿನ ಸಿನಿಮಾರಂಗದ ಆಗುಹೋಗುಗಳ ಕುರಿತು ಚರ್ಚಿಸಿದರು ಎಂದು ತಿಳಿದು ಬಂದಿದೆ.

















