ಮಡಿಕೇರಿ ಫೆ.13 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು.
ಫೆ.11 ರಂದು ಸಂಜೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ, ದೀಪಾರಾಧನೆ, ಮಹಾಪೂಜೆ ಮತ್ತು ಅನ್ನದಾನ ನೆರವೇರಿತು. ನಂತರ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.
ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಹಾಗೂ ಅನ್ನದಾನ ನಡೆಯಿತು.
ಸಂಜೆ ರಂಗಪೂಜೆ, ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಹಾಗೂ ಅನ್ನದಾನ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.









