ಮಡಿಕೇರಿ ಫೆ.13 : ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ಅಪ್ರೇಂಟಿಸ್ ಮೇಳ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಸಂಸ್ಥೆಯ ಉಪನಿರ್ದೇಶಕ ಹಾಗೂ ಪ್ರಾಚಾರ್ಯ ಪಂಡಿತಾರಾಧ್ಯ ಮೇಳದ ಪ್ರಯೋಜನಗಳ ಬಗ್ಗೆ ಅಭ್ಯರ್ಥಿಗಳಿಗೆ ವಿವರಿಸಿ ಎಲ್ಲಾ ಅಭ್ಯರ್ಥಿಗಳು ಮೇಳದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಯೋಗೇಶ್ ಕುಮಾರ್ ಮಾತನಾಡಿ, ಅಭ್ಯರ್ಥಿಗಳಿಗೆ ಅಲ್ಪಾವಧಿ ತರಬೇತಿಗಳ ಬಗೆಗಿನ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಡಿಕೇರಿ ಸರ್ಕಾರಿ ಕೈಗಾರಿಕಾ ಸಂಸ್ಥೆಯ ವಿದ್ಯಾರ್ಥಿಗಳು, ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು, ಆಲೂರು ಸಿದ್ದಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಭಾಗಮಂಡಲ ಕೆವಿಜಿ ಐಟಿಐ ವಿದ್ಯಾರ್ಥಿಗಳು ಪಾಲ್ಗೊಂಡು ಮೇಳದ ಪ್ರಯೋಜನವನ್ನು ಪಡೆದುಕೊಂಡರು.
ಮೇಳದಲ್ಲಿ ಸುಮಾರು 120ಕ್ಕೂ ಅಧಿಕ ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡು ವಿವಿಧ ಕೈಗಾರಿಕೆಗಳ ಸಂಪನ್ಮೂಲ ವ್ಯಕ್ತಿಗಳು ನಡೆಸುವ ಸಂದರ್ಶನದಲ್ಲಿ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ತರಬೇತಿ ಅಧಿಕಾರಿ ಸೂರ್ಯನಾರಾಯಣ, ಎಲ್ಲಾ ಸಂಸ್ಥೆಗಳ ಉಪನ್ಯಾಸಕರುಗಳು ಮತ್ತು ಟಾಟಾ ಟೆಕ್ನಾಲಾಜಿಸ್‍ನ ಎಸ್‍ಎಂಇ ಗಳಾದ ಗುರುಕೃಷ್ಣ ಮತ್ತು ಶಿಲ್ಪ ಹಾಜರಿದ್ದರು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ದೀಪಾರಾಣಿ ನಿರೂಪಿಸಿದರು, ರಂಜಿತಾ ಸ್ವಾಗತ ಕೋರಿದರು. ಮಮತಾ ಸರ್ವರನ್ನು ವಂದಿಸಿದರು.









