ಮಡಿಕೇರಿ ಫೆ.13 : ಲಾರಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋಣಿಕೊಪ್ಪದ ಕೈಕೇರಿ ಬಳಿ ನಡೆದಿದೆ.
ಕಾರು ಚಾಲಕ ಬಿಟ್ಟಂಗಾಲದ ನಿವಾಸಿ ನಂದೇಟಿರ ಸದನ್ ಚಂಗಪ್ಪ(49) ಸಾವನ್ನಪ್ಪಿರುವ ದುರ್ದೈವಿ. ಕಾರಿನಲ್ಲಿದ್ದ ಇತರ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗೋಣಿಕೊಪ್ಪದಿಂದ ವಿರಾಜಪೇಟೆಗೆ ಬರುತ್ತಿದ್ದ ಕಾರು ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.













