ಮಡಿಕೇರಿ ಫೆ.13 : ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾ ಮಗುಚಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪದ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
ಕೆ.ಆರ್.ನಗರ ತಾಲ್ಲೂಕಿನ ಕೊರಟಿಕೆರೆ ಗ್ರಾಮದ ನಿವಾಸಿ ಪಂಕಜಮ್ಮ(55) ಮೃತ ಪಟ್ಟ ಮಹಿಳೆ. ಸಹೋದರಿಯರಾದ ಕೂಡಿಗೆಯ ಲೀಲಾವತಿ ಹಾಗೂ ವಿಜಯಲಕ್ಷ್ಮಿ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕುಶಾಲನಗರ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಟೋ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.













