ಮಡಿಕೇರಿ ಫೆ.15 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಫೆ.18 ರಂದು ‘ಮಹಾ ಶಿವರಾತ್ರಿ’ ಹಬ್ಬದ ಪ್ರಯುಕ್ತ ಬೆಳಗ್ಗೆ 9.30 ಗಂಟೆಯಿಂದ 11.30 ಗಂಟೆವರೆಗೆ ವಿಶೇಷ ಸೇವೆ “ರುದ್ರಹೋಮ“ವನ್ನು ಏರ್ಪಡಿಸಲಾಗಿದೆ. ಭಕ್ತಾಧಿಗಳು ಮುಂಗಡವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೋರಿದೆ.
ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಭಾಜನರಾಗುವಂತೆ ಹಾಗೂ ದೇವಾಲಯಕ್ಕೆ ತನು ಮನ ಧನ ಸಹಾಯ ನೀಡುವವರು ಸೇವಾ ಕೌಂಟರ್ ನಲ್ಲಿ ಪಾವತಿಸಿ ಅಧಿಕೃತ ರಶೀದಿಯನ್ನು ಪಡೆದುಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.9902290302, 9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.














