ಮಡಿಕೇರಿ ಫೆ.16 : ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಹೊಸ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಸಲುವಾಗಿ ಮತ್ತು ಶೈಕ್ಷಣಿಕ ವಾತಾವರಣದಲ್ಲಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡಲು “ಅಡ್ವಾನ್ಸ್ಡ್ ಲ್ಯಾಬ್‌ವೀವ್” ಕುರಿತು ಮೂರು ದಿನಗಳ ಹ್ಯಾಂಡ್ಸ್-ಆನ್ ಕಾರ್ಯಾಗಾರ ನಡೆಯಿತು.
ಕೊಡವ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಡಾ. ಎಂ.ಸಿ.ಕಾರ್ಯಪ್ಪ ಮೂರು ದಿನಗಳ ಕಾರ್ಯಾಗಾರವನ್ನುಉದ್ಘಾಟಿಸಿದರು.
ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಕೆನಡಾದ ಮಾಂಟ್ರಿಯಲ್ ಸಿ.ಎಸ್. ಗ್ರೂಪ್ ನ ಎಂಬೆಡೆಡ್ ಸಾಫ್ಟ್ವೇರ್ ಸ್ಪೆಷಲಿಸ್ಟ್ ವಿ.ಆರ್.ಮಂಜುನಾಥ್ ವಿಷಯದ ಬಗ್ಗೆ ವಿಧ್ಯಾರ್ಥಿಗಳಿಗೆ ಸರಳವಾಗಿ ಮನದಟ್ಟು ಮಾಡಿದರು.
ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಎಂ. ಬಸವರಾಜು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ದಿವಾಕರ ಹಾಗೂ ವಿಭಾಗದ ಭೋದಕ ಹಾಗೂ ಭೋದಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಸಮರೋಪ ಸಮಾರಂಭದಲ್ಲಿ ಕೊಡವ ಎಜುಕೇಶನ್ ಸೊಸೈಟಿಯ ಗೌರವಾನ್ವಿತ ಕಾರ್ಯದರ್ಶಿ ಸಿ.ಪಿ.ರಾಕೇಶ್ ಪೂವಯ್ಯ ಸಂಪನ್ಮೂಲ ವ್ಯಕ್ತಿಯನ್ನು ಸನ್ಮಾನಿಸಿದರು ಹಾಗೂ ವಿಧ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು.








