ಮಡಿಕೇರಿ ಫೆ.16 : ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ನಡೆಯಿತು. ಸುಂಟಿಕೊಪ್ಪದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಾನ್ ಪರೀಕ್ಷೆಗೆ ಸೂಕ್ತ ತಯಾರಿ ಹಾಗೂ ಪರೀಕ್ಷೆಯನ್ನು ಆತ್ಮ ವಿಶ್ವಾಸದಿಂದ ಎದುರಿಸುವ ಕುರಿತು ಉಪನ್ಯಾಸ ಮತ್ತು ಬದಲಾದ ಹೊಸ ಮಾದರಿ ಪ್ರಶ್ನೆ ಪತ್ರಿಕೆಯ ಬಗ್ಗೆ ಮಾಹಿತಿ ನೀಡಿದರು.
ಚೆನ್ನಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಸಿ ಜಿ ಮಂದಪ್ಪ ಮಾತನಾಡಿ ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜನ್ನು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಕೇಂದ್ರವನ್ನಾಗಿ ರೂಪಿಸುವಲ್ಲಿ ಕೊಡಗು ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು , ಜಾನ್ ರವರ ಪಾತ್ರ ಮಹತ್ವ ಪೂರ್ಣವಾದುದು ಎಂದು ಶಾಘಿಸಿದರು. ದೂರದ ಊರಿನಿಂದ ಬರುವ ವಿದ್ಯಾರ್ಥಿ ಗಳಿಗೆ ಇದರಿಂದ ಬಹಳ ಅನುಕೂಲವಾಗಿದೆ ಎಂದರು.
ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್ ಮತ್ತು ಸದಸ್ಯರು ಜಾನ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ವಿದ್ಯಾರ್ಥಿನಿ ಅದವಿಯಾ ನಿರೂಪಿಸಿ , ಉಪನ್ಯಾಸಕ ಕೆವಿ ರಾಜಸುಂದರಂ ಸ್ವಾಗತಿಸಿದರು.ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಶಿಕ್ಷಕಿ ಬಿಂದು ವಂದಿಸಿದರು.










