ಮಡಿಕೇರಿ ಫೆ.16 : ಕೊಡಗು ಜಿಲ್ಲಾ ತಮಿಳು ಯುವ ಒಕ್ಕೂಟದ ವತಿಯಿಂದ ಸಮುದಾಯ ಬಾಂಧವರಿಗಾಗಿ 5ನೇ ವರ್ಷದ ಜಿಲ್ಲಾ ಮಟ್ಟದ ಕಾವೇರಿ ಕ್ರೀಡೋತ್ಸವ, ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಫೆ.18 ಮತ್ತು 19ರಂದು ಚೆಟ್ಟಳ್ಳಿಯ ಪ್ರೌಢ ಶಾಲಾ ಮೈದಾನದಲ್ಲಿ ನಡೆಯಲಿದೆ.
ಕ್ರೀಡಾಕೂಟವನ್ನು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲ ಎ.ಎಸ್ ಪೊನ್ನಣ್ಣ ಉದ್ಘಾಟಿಸಲಿದ್ದಾರೆ.
ಎರಡು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು, ಫೆ.18 ರಂದು ನಡೆಯಲಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ 15 ತಂಡಗಳು ಭಾಗವಹಿಸಲಿದೆ.
ಫೆ.19ರಂದು ನಡೆಯಲಿರುವ ಸಮಾರೋಪ ಸಮಾರಂಭವನ್ನು ಸಮಾಜ ಸೇವಕ ನಾಪಂಡ ಮುತ್ತಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮೋಹನ್ ರಾಜು ಸೇರಿದಂತೆ ತಮಿಳು ಸಂಘಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅಂದು ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಹಗ್ಗಜಗ್ಗಾಟ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಕ್ಕಳಿಗೆ, ಯುವಕ, ಯುವತಿ, ಮಹಿಳೆಯರಿಗೆ ಹಾಗೂ ವೃದ್ಧರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯುತ್ತದೆ.
ಮಧ್ಯಾಹ್ನನದ ಭೋಜನ ಕೂಟದ ಬಳಿಕ ಮುಖ್ಯ ಅತಿಥಿಗಳು ಸಾಂಸ್ಕೃತಿಕ ಕಾರ್ಯಮಕ್ಕೆ ಚಾಲನೆ ನೀಡಲಿದ್ದು, ಸಾಂಸ್ಕೃತಿಕ ನೃತ್ಯ ಸ್ಪರ್ಧೆ ಹಾಗೂ ವಿವಿಧ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ.
ಸಮಾರೋಪ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಹಂತಗಳಲ್ಲಿ ಶೇ.70 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಈ ಸಂದರ್ಭ ವಿವಿಧ ಕ್ರೀಡಾಕೂಟದ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ.
ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ವಿಜೇತ ತಂಡ ಹಾಗೂ ರನ್ನರ್ ಆಫ್ ತಂಡಕ್ಕೆ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರ. ಕಾರ್ಯದರ್ಶಿ ಮೋಹನ್ ರಾಜ್ : +919108255266 /+919945103012,
ಅಧ್ಯಕ್ಷ ರವಿ : +919008921282 ಸಂಪರ್ಕಿಸಬಹುದಾಗಿದೆ.
ಜಿಲ್ಲೆಯ ನಾನಾ ಕಡೆಗಳಲ್ಲಿ ನೆಲೆಸಿರುವ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಕೊಡಗು ತಮಿಳ್ ಯೂತ್ ಫೆಡರೇಷನ್
ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








