ಮಡಿಕೇರಿ ಫೆ.17 : ರಾಷ್ಟ್ರಮಟ್ಟದಲ್ಲಿ ನೂರು ವರ್ಷ ಪೈರೈಸಿದ ಐದು ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಕರ್ನಾಟಕದ ಮೂರು ಕೃಷಿ ಪತ್ತಿನ ಸಹಕಾರ ಸಂಘಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕೊಡಗಿನ ಭಾಗಮಂಡಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಶಸ್ತಿಗೆ ಭಾಜನವಾಗಿದೆ.
ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳ ಸಭೆಯಲ್ಲಿ ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉಪಾಧ್ಯಕ್ಷ ಹರೀಶ್ ಪೂವಯ್ಯ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್ ಅವರು ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸೂರು ಜೆ.ಎಸ್.ನಂಜುಡಪ್ಪ ಅವರಿಗೆ ಹಸ್ತಾಂತರಿಸಿದರು.








