ಮಡಿಕೇರಿ ಫೆ.17 : ನಂಜರಾಯಪಟ್ಟಣ ಗ್ರಾ.ಪಂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಗ್ರಾಮ ಸಭೆಯು ಫೆ.21 ರಂದು ನಡೆಯಲಿದೆ.
ಗ್ರಾ.ಪಂ ಅಧ್ಯಕ್ಷ ಸಿ.ಎಲ್.ವಿಶ್ವ ಅಧ್ಯಕ್ಷತೆಯಲ್ಲಿ ನಂಜರಾಯಪಟ್ಟಣ ಅಂಗನವಾಡಿ ಕೇಂದ್ರದಲ್ಲಿ ನಡೆಯಲಿರುವ ಸಭೆಯಲ್ಲಿ ಗ್ರಾ.ಪಂ ವ್ಯಾಪ್ತಿಯ ನಾಗರೀಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಗ್ರಾ.ಪಂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.








