ಮಡಿಕೇರಿ ಫೆ.17 : ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಫೆಬ್ರವರಿ, 19 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಫೆಬ್ರವರಿ, 19 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಕೊಡವ ಭಾಷಿಕ ಸಮುದಾಯಗಳ ವತಿಯಿಂದ ನಡೆಯುವ ‘ಒತ್ತೋರ್ಮೆ ಕೂಟ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.









