ಮಡಿಕೇರಿ ಫೆ.17 : ನಗರದ ಮನೆಯೊಂದರಲ್ಲಿ 500 ಗ್ರಾಂ ಗಾಂಜಾ ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ರಾಣಿಪೇಟೆಯ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ದಾಸ್ತಾನು ಮಾಡಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಶ್ವಾನ ದಳ, ಕಂದಾಯ ಇಲಾಖೆ, ನಗರಸಭೆ ಅಧಿಕಾರಿಗಳ ಸಹಿತ ಮನೆಯ ಮೇಲೆ ದಾಳಿ ನಡೆಸಿದರು. ಈ ಸಂದರ್ಭ ಮಾಲು ಸಹಿತ ನಾಲ್ವರು ಆರೋಪಿಗಳನ್ನು ಸ್ಥಳದಲ್ಲೇ ಬಂಧಿಸಲಾಗಿದೆ.
ಮಡಿಕೇರಿ ನಿವಾಸಿಗಳಾದ ಅಜ್ಗರ್, ನೌಶಾದ್, ಮಂಜು ಹಾಗೂ ರಫೀಕ್ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಗರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.













