ಮಡಿಕೇರಿ ಫೆ.17 : ಕಾರ್ಮಿಕ ವರ್ಗದ ಅನೇಕ ವರ್ಷಗಳ ಬೇಡಿಕೆಗಳಲ್ಲಿ ಕೆಲವನ್ನಷ್ಟೇ ಈಡೇರಿಸಲಾಗಿದೆ, ಕಾರ್ಮಿಕರ ಅಭ್ಯುದಯಕ್ಕಾಗಿ ಹೊಸ ಯೋಜನೆಗಳನ್ನು ಘೋಷಿಸಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಶ್ರಮಿಕ ವರ್ಗ ತತ್ತರಿಸಿ ಹೋಗಿದೆ. ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಮೇಲಿನ ತೆರಿಗೆ ಇಳಿಕೆ ಮಾಡಿ ಇವುಗಳ ಬೆಲೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ.
ಕೊಡಗು ಜಿಲ್ಲೆಗೆ ಕೇವಲ ರೂ.100 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಸರ್ಕಾರ ಕೈತೊಳೆದುಕೊಂಡಿದೆ. ಕಾಫಿ ಮತ್ತು ಕರಿಮೆಣಸು ಇಲ್ಲಿನ ಪ್ರಮುಖ ಬೆಳೆಯಾದರೂ ಬೆಳೆಗಾರರ ನೆರವಿಗೆ ಪೂರಕವಾಗುವ ಯಾವುದೇ ವಿಶೇಷ ಅನುದಾನವನ್ನು ನೀಡಿಲ್ಲ, ಕೊಡಗು ಜಿಲ್ಲೆಗೆ ಅನ್ಯಾಯವಾಗಿದೆ.
(ಪಿ.ಆರ್.ಭರತ್, ಕಾರ್ಮಿಕ ಸಂಘಟನೆಗಳ ಮುಖಂಡ, ಕೊಡಗು ಜಿಲ್ಲೆ)








