ಮಡಿಕೇರಿ ಫೆ.17 : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜನಸ್ನೇಹಿ ಬಜೆಟ್ ಮಂಡಿಸಿದ್ದಾರೆ. ಕೊಡಗು ಜಿಲ್ಲೆಯ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಕೋರಿ ಮನವಿ ನೀಡಲಾಗಿತ್ತು, ಅದಕ್ಕೆ ಸ್ಪಂದಿಸಿ ಮುಖ್ಯ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ 500 ಕಾಲು ಸೇತುವೆಗಳ ನಿರ್ಮಾಣಕ್ಕೆ 250 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ. ರೈತ ಶಕ್ತಿ ಯೋಜನೆ ರೈತರಲ್ಲಿ ಆರ್ಥಿಕ ಚೈತನ್ಯವನ್ನು ತುಂಬಿದೆ. 400 ಕೋಟಿ ರೂ. ಮೀಸಲಿಡುವ ಮೂಲಕ ರೈತರಲ್ಲಿ ನವೋತ್ಸಾಹ ಮೂಡಿಸಿದೆ.
(ಕೆ.ಜಿ.ಬೋಪಯ್ಯ, ಶಾಸಕರು, ವಿರಾಜಪೇಟೆ ಕ್ಷೇತ್ರ)









