ಮಡಿಕೇರಿ ಫೆ.18 : ಮಡಿಕೇರಿ ನಗರದ ದಾಸವಾಳ ಬಡಾವಣೆಯಲ್ಲಿರುವ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಮುಂಜಾನೆ ಮಡಿವಾಳರ ಅಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ ಮಹಾಗಣಪತಿ ಹೋಮ ನೆರವೇರಿತು.
ನಂತರ ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯದ ವರೆಗೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು.
ಮಧ್ಯಾಹ್ನ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
::: ದ್ವಾರ ಉದ್ಘಾಟನೆ ::: ಶ್ರೀ ಮಡಿವಾಳ ಮಾಚಿದೇವ ಮಹಾದ್ವಾರವನ್ನು ಉದ್ಘಾಟಿಸಲಾಯಿತು.
ಸಂಜೆ ಜಾಮ ಪೂಜೆ ಮತ್ತು ರಂಗಪೂಜೆ ನೆರವೇರಲಿದ್ದು, ಜಾಗರಣೆ ಪ್ರಯುಕ್ತ ಮಹಾಮೃತ್ಯುಂಜಯ ಹೋಮ ಸಭಾ ಕಾರ್ಯಕ್ರಮ ಮತ್ತು ನೃತ್ಯ ಸ್ಪರ್ಧೆ ನಡೆಯಲಿದೆ.