ಶನಿವಾರಸಂತೆ ಫೆ.18 : ಕಾಡಾನೆಯೊಂದು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಎಳನೀರುಗುಂಡಿ ಗ್ರಾಮದಲ್ಲಿ ನಡೆದಿದೆ.
ಕಾಫಿ ತೋಟದಲ್ಲಿ ನೀರಾವರಿ ಸೌಲಭ್ಯಕ್ಕಾಗಿ ನಿರ್ಮಿಸಿದ್ದ ನೀರಿನ ತೊಟ್ಟಿಗೆ ಸುಮಾರು 20 ವರ್ಷದ ಹೆಣ್ಣಾನೆಯೊಂದು ಬಿದ್ದು ಮೃತಪಟ್ಟಿದೆ. ಪಕ್ಕದ ಮೀಸಲು ಅರಣ್ಯದಿಂದ ಬಂದ 3 ಕಾಡಾನೆಗಳು ಕಾಫಿ ತೋಟದೊಳಗೆ ನುಸುಳಿದೆ. ಈ ಸಂದರ್ಭ ಹೆಣ್ಣಾನೆಯೊಂದು ಆಕಸ್ಮಿಕವಾಗಿ ಸುಮಾರು 10 ಅಡಿಯಷ್ಟು ಆಳದ ನೀರಿನ ತೊಟ್ಟಿಯೊಳಗೆ ಬಿದ್ದಿದೆ. ಹೊರ ಬರಲು ಸಾಧ್ಯವಾಗದ ಆನೆ ಉಸಿರುಗಟ್ಟಿ ಮೃತಪಟ್ಟಿದೆ.
ಶನಿವಾರ ಬೆಳಗ್ಗೆ ತೋಟದ ಕಾರ್ಮಿಕರು ನೀರಿನ ತೊಟ್ಟಿಯಲ್ಲಿ ಆನೆ ಸತ್ತು ಬಿದ್ದಿರುವುದನ್ನು ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಶನಿವಾರಸಂತೆ ಅರಣ್ಯ ವಲಯಾಧಿಕಾರಿ ಪ್ರಪುಲ್‌ಕುಮಾರ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಆನೆಯ ಮೃತದೇಹವನ್ನು ಹೊರ ತೆಗೆದರು. ಶನಿವಾರಸಂತೆ ಪಶುವೈದ್ಯಾಧಿಕಾರಿ ಡಾ.ಸತೀಶ್ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಪಕ್ಕದ ಮೀಸಲು ಅರಣ್ಯದಲ್ಲಿ ಅಂತಿಮ ಸಂಸ್ಕಾರ ಮಾಡಲಾಯಿತು. ನೀರಿನ ತೊಟ್ಟಿ ಬಳಿ ಇತರ ಕಾಡಾನೆಗಳು ಓಡಾಡುತ್ತಿದ್ದುದರಿಂದ ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕಗೊoಡಿದ್ದರು. (( ವರದಿ : ದಿನೇಶ್ ಮಾಲಂಬಿ, ಶನಿವಾರಸಂತೆ ))
Breaking News
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*