ಮಡಿಕೇರಿ ಫೆ.19 : ವ್ಯಕ್ತಿಯೊಬ್ಬರು ಗುಂಡೇಟಿನಿoದ ಮೃತಪಟ್ಟ ಘಟನೆ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ. ತಂದೆಯಿoದಲೇ ಪುತ್ರನ ಹತ್ಯೆಯಾಗಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನoದೇಟಿರ ನಿರನ್(28) ಎಂಬುವವರೇ ಮೃತ ವ್ಯಕ್ತಿಯಾಗಿದ್ದು, ಆರೋಪಿ ತಂದೆ ನಂದೇಟಿರ ಚಿಟ್ಟಿಯಪ್ಪ ಸಾಬು(58) ಅವರನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿಯಿಂದ ಕೋವಿಯನ್ನು ವಶಕ್ಕೆ ಪಡೆಯಲಾಗಿದೆ.
ಕೌಟುಂಬಿಕ ಕಲಹವೇ ಘಟನೆಗೆ ಕಾರಣವೆಂದು ಹೇಳಲಾಗಿದ್ದು, ನಿರನ್ ಟಿವಿ ನೋಡುತ್ತಿದ್ದ ಸಂದರ್ಭ ತಂದೆ ಸಾಬು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*