ನಾಪೋಕ್ಲು ಫೆ.20 : ಬಿದ್ದಾಟಂಡ ವಾಡೆಯ ಮಹಾದೇವ ದೇವಾಲಯದಲ್ಲಿ ಶಿವರಾತ್ರಿಯ ಅಂಗವಾಗಿ ರುದ್ರಾಭಿಷೇಕ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು.
ಅರ್ಚಕ ಕೀರ್ತೀಶ್ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದರು.
ರಾತ್ರಿ ಜಾಗರಣೆ ಪ್ರಯುಕ್ತ ರುದ್ರಾಭಿಷೇಕ, ಮಹಾಪೂಜೆ ನೆರವೇರಿತು.
ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಬಿದ್ದಾಟಂಡ ಮುತ್ತಣ್ಣ ಹಾಗೂ ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ