ನಾಪೋಕ್ಲು ಫೆ.20 : ಶಿವರಾತ್ರಿಯ ಪ್ರಯುಕ್ತ ಪೇರೂರು ಗ್ರಾಮದ ಇಗ್ಗುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು.
ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆ ನಡೆಯಿತು. ನಂತರ ನೆರದಿದ್ದವರಿಗೆ ಅನ್ನಸಂತರ್ಪಣೆ ಜರುಗಿತು.
ಮಧ್ಯಾಹ್ನ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು. ಬಳಿಕ ಇಗ್ಗುತ್ತಪ್ಪ ದೇವರ ಉತ್ಸವ ಜರುಗಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ನೃತ್ಯಬಲಿ ವೀಕ್ಷಿಸಿದರು.
ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಸದಸ್ಯರು, ತಕ್ಕಮುಖ್ಯಸ್ಥರು ಸೇರಿದಂತೆ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ : ದುಗ್ಗಳ ಸದಾನಂದ.