ಕರಿಕೆ ಫೆ.20 : ಕೊಡಗು ಜಿಲ್ಲೆಯ ಗಡಿ ಗ್ರಾಮ ಕರಿಕೆಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.
ಸಭೆಯಲ್ಲಿ ಗ್ರಾಮಸ್ಥರು ಬಸ್ ಸೌಲಭ್ಯ, ಮೂಲಭೂತ ಸೌಲಭ್ಯ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳ ಗಮನ ಸೆಳೆದರು.
ಗ್ರಾ.ಪಂ ಅಧ್ಯಕ್ಷರು, ಕಂದಾಯ ಇಲಾಖೆಯ ಅಧಿಕಾರಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಆರೊಗ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದು, ಸಮಸ್ಯೆಗಳ ಕುರಿತು ಚರ್ಚಿಸಿದರು.