ಮಡಿಕೇರಿ ಫೆ.20 : ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲಿ ‘ನೇರ ವೇತನ ಪಾವತಿ’ಯನ್ನು ಜಾರಿಗೊಳಿಸದೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ವಂಚಿಸಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಈರಪ್ಪ ಶೆಟ್ಟಿ ಆರೋಪಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆ.22 ರಂದು ‘ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ’ ಘೋಷ ವಾಕ್ಯದೊಂದಿಗೆ ಮುಖ್ಯಮಂತ್ರಿಗಳ ಮನೆ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವ್ಯಾಪಿ ನಗರಸಭೆ, ಪಟ್ಟಣ ಪಂಚಾಯ್ತಿ, ನಗರಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ 13 ಸಾವಿರಕ್ಕೂ ಹೆಚ್ಚಿನ ಮಂದಿ ನೀರ ಗಂಟಿಗಳಾಗಿ, ಡಾಟಾ ಆಪರೇಟರ್, ಸ್ವಚ್ಛತಾ ನೌಕರರಾಗಿ, ವಾಹನ ಚಾಲಕರಾಗಿ, ಬೀದಿ ದೀಪ ನಿರ್ವಾಹಕರು, ಗಾರ್ಡನರ್‍ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೇವಾಭದ್ರತೆ ಇಲ್ಲದೆ ಸಂಕಷ್ಟದಲ್ಲಿರುವ ಇವರಿಗೆ ನೇರ ಪಾವತಿಯ ಮೂಲಕ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು.
ಈ ಹಿಂದೆ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ ಸಂದರ್ಭ ಮುಖ್ಯ ಮಂತ್ರಿಗಳು, ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿಗೆ ಒಳಪಡಿಸುವ ಭರವಸೆ ನೀಡಿದ್ದರು. ಬಜೆಟ್‍ನಲ್ಲಿ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದೆನ್ನುವ ನಿರೀಕ್ಷೆ ಹುಸಿಯಾಗಿದೆ. ಇದೇ ಕಾರಣಕ್ಕೆ ಮತ್ತೆ ಪ್ರತಿಭಟನೆಗೆ ಮುಂದಾಗಿರುವುದಾಗಿ ಸ್ಪಷ್ಟಪಡಿಸಿದರು.
ಕೊಡಗು ಜಿಲ್ಲಾ ವ್ಯಾಪ್ತಿಯ ಸ್ಥಳೀಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ 80 ಮಂದಿ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೊರಗುತ್ತಿಗೆ ನೌಕರರ ಸಂಕಷ್ಟಗಳನ್ನು ಅರಿತು, ಪ್ರತಿಭಟನೆಗೆ ಸಹಕರಿಸಬೇಕೆಂದು ಮನವಿ ಈರಪ್ಪ ಶೆಟ್ಟಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘದ ಉಪಾಧ್ಯಕ್ಷರಾದ ಎ.ಎ.ಬೋಪಣ್ಣ, ಕಾರ್ಯದರ್ಶಿ ಟಿ.ಬಿ.ರಮೇಶ್, ಜಿಲ್ಲಾ ಸಂಚಾಲಕ ಮಹದೇವಪ್ಪ, ಸಂಘದ ನೀರು ಸರಬರಾಜು ವಿಭಾಗದ ಅಧ್ಯಕ್ಷ ಶಿವಪ್ರಕಾಶ್ ಶೆಟ್ಟಿ ಹಾಗೂ ರಾಜ್ಯ ಸಂಚಾಲಕ ಹೆಚ್.ಪಿ.ಗುರುರಾಜ್ ಉಪಸ್ಥಿತರಿದ್ದರು.
Breaking News
- *ಕನ್ನಡ ಸಾಹಿತ್ಯ ಭವನ ನಿರ್ಮಾಣ : ಅಗತ್ಯ ಸಹಕಾರಕ್ಕೆ ಕೊಡಗು ಜಿಲ್ಲಾ ಕ.ಸಾ.ಪ ಮನವಿ*
- *ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ‘ಅರೆ ವಿಶೇಷ ಕೊಠಡಿ’ ಉದ್ಘಾಟನೆ : ಎಲ್ಲರಿಗೂ ಎಲ್ಲೆಡೆ ಆರೋಗ್ಯ ಸೌಲಭ್ಯ ದೊರೆಯಲಿ : ಶಾಸಕ ಡಾ.ಮಂತರ್ ಗೌಡ*
- *ಬೃಹತ್ ಭೂಪರಿವರ್ತನೆ, ಭೂವಿಲೇವಾರಿ, ಲೇಔಟ್, ಮೆಗಾ ಟೌನ್ಶಿಪ್ಗೆ ವಿರೋಧ : ಕಡಂಗದಲ್ಲಿ ಸಿಎನ್ಸಿಯಿಂದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
- *ಡಿ.8 ರಂದು ಮಡಿಕೇರಿಯಲ್ಲಿ ಸಂಸದರ ನೂತನ ಕಚೇರಿ ಆರಂಭ*
- *ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*
- *ಕರಿಕೆ ಬಿಜೆಪಿ ಶಕ್ತಿ ಕೇಂದ್ರಕ್ಕೆ ಪದಾಧಿಕಾರಿಗಳ ಆಯ್ಕೆ*
- *ವೀರ ಸೇನಾನಿಗಳಿಗೆ ಅಗೌರವ : ಡಿ.6ರಂದು ಮಡಿಕೇರಿಯಲ್ಲಿ ಮಾಜಿ ಸೈನಿಕರಿಂದ ಪ್ರತಿಭಟನೆ*
- *‘ಸ್ವಾಭಿಮಾನಿ’ ಸಮಾವೇಶದಲ್ಲಿ ಕೊಡಗಿನಿಂದ 8 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿ*
- *ಚೇಶೈರ್ ಹೋಮ್ ಶಾಲೆಯ ಮುಖ್ಯಶಿಕ್ಷಕ ಶಿವರಾಜ್ ಗೆ ಸನ್ಮಾನ*