ವಿರಾಜಪೇಟೆ ಫೆ.20: ವಿರಾಜಪೇಟೆಯ ತೆಲುಗರ ಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ದಕ್ಷಿಣ ಮಾರಿಯಮ್ಮ ಮತ್ತು ಅಂಗಾಳ ಪರಮೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶಿವರಾತ್ರಿ ಮಹೋತ್ಸವ ಪ್ರಯುಕ್ತ ಪಲ್ಲಕ್ಕಿ ಉತ್ಸವ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ನಡೆದು ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ಅತ್ಯಂತ ವಿಜ್ರಂಭಣೆಯಿಂದ ನಡೆಯಿತು.
ಸಂಜೆ ನಡೆದ ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಮಹಿಳೆಯರು ನವದಾನ್ಯಗಳ ಕಳಸ ಹೊತ್ತು ತೆಲುಗರ ಬೀದಿಯಿಂದ ಹೊರಟು ಮಾರಿಯಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
ಮೆರವಣಿಗೆಯಲ್ಲಿ ವಿವಿಧ ವಾದ್ಯಗೋಷ್ಟಿಗಳೊಂದಿಗೆ, ಚಂಡೆಮೇಳ, ಕಲಾ ತಂಡಗಳು ಮೆರುಗು ನೀಡಿದವು.