ಮಡಿಕೇರಿ ಫೆ.20 : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್‍ಒ) 2 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬಿಎಎಂಎಸ್, ಬಿಯುಎಂಎಸ್, ಎಎಚ್‍ಎಂಎಸ್ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಯ ಮೀಸಲಾತಿ (ಪ್ರವರ್ಗ) ಪ.ಜಾ-01, ಸಾ.ಅ.01. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್‍ಒ) ಹುದ್ದೆಗಳನ್ನು ಒಂದು ವರ್ಷದವರಗೆ ಅಥವಾ ಸದರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಖಾಯಂ ವೈದ್ಯಾಧಿಕಾರಿಗಳ ಹುದ್ದೆಗಳು ಭರ್ತಿಯಾಗುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಚಾಲ್ತಿಯಲ್ಲಿರುತ್ತದೆ.
ತಮ್ಮ ಸಂಪೂರ್ಣ ವಿವರಗಳುಳ್ಳ ಅರ್ಜಿಗಳನ್ನು ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ, 24 ಕೊನೆಯ ದಿನವಾಗಿದೆ. ನೇರ ಸಂದರ್ಶನಕ್ಕೆ ದಿನಾಂಕವನ್ನು ನಂತರ ತಿಳಿಸಲಾಗುವುದು.
ಅರ್ಜಿಯನ್ನು ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಚೇರಿ, ಮಹದೇವಪೇಟೆ, ಮಡಿಕೇರಿ, ಪಿನ್-571201, ಕೊಡಗು ಜಿಲ್ಲೆ ಇಲ್ಲಿ ಸಲ್ಲಿಸಬಹುದು ಎಂದು ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.














