ಮಡಿಕೇರಿ ಫೆ.21 : ಓಮ್ನಿ ವ್ಯಾನ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಪಾಲಿಬೆಟ್ಟ- ತಿತಿಮತಿ ರಸ್ತೆಯಲ್ಲಿ ನಡೆದಿದೆ.
ಬೈಕ್ ಸವಾರ, ಹುಣಸೂರು ನಿವಾಸಿ ಕೆಂಪನಾಯಕ(35) ಎಂಬುವವರೇ ಮೃತ ದುರ್ದೈವಿ. ಎರಡು ವಾಹನಗಳು ಡಿಕ್ಕಿಯಾದ ರಭಸಕ್ಕೆ ಕೆಂಪನಾಯಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.













