ಮಡಿಕೇರಿ ಫೆ.21 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ಫೆ.25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
ಮಡಿಕೇರಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ಮೈಸೂರು ಸುಯೋಗ್ ಆಸ್ಪತ್ರೆಯ ಹೃದಯ ತಜ್ಞರು, ಸ್ತ್ರೀರೋಗ ತಜ್ಞರು, ಫಿಜಿಷಿಯನ್ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ. ಇಕೊ ಪರೀಕ್ಷೆ, ಇಸಿಜಿ, ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆಗಳು ನಡೆಯಲಿವೆ.
ಸಂಘದ ಸದಸ್ಯರು ಹಾಗೂ ಅವರ ಕುಟುಂಬದವರು ಮತ್ತು ಪತ್ರಕರ್ತರು ಶಿಬಿರದ ಸದುಪಯೋಗ ಪಟೆದುಕೊಳ್ಳುವಂತೆ ಕೊಡಗು ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿಗಳಾದ ಉಜ್ವಲ್ ರಂಜಿತ್ ತಿಳಿಸಿದ್ದಾರೆ.