ಮಡಿಕೇರಿ ಫೆ.21 : ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆ ಕೇಂದ್ರಗಳನ್ನು ನಗರದ ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ ಮತ್ತು ವಿರಾಜಪೇಟೆಯ ವಿಧಾನಸಭಾ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗುವವರೆಗೆ ಈ ಪ್ರಾತ್ಯಕ್ಷಿಕೆ ನಡೆಯಲಿದೆ. ಜೊತೆಗೆ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ 542 ಮತಗಟ್ಟೆ ವ್ಯಾಪ್ತಿಯಲ್ಲಿಯೂ ಸಹ ಜಾಗೃತಿ ಮೂಡಿಸಲಾಗುತ್ತದೆ. ವಿದ್ಯುನ್ಮಾನ ಮತಯಂತ್ರದ ಬಗ್ಗೆ ಪ್ರಾತ್ಯಕ್ಷಿಕೆ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಭಾರತ ಚುನಾವಣಾ ಆಯೋಗದಿಂದ ಕೊಡಗು ಜಿಲ್ಲೆಗೆ ತೆಲಂಗಾಣ ರಾಜ್ಯದ ಹೈದ್ರಾಬಾದ್‍ನ ಭಾರತೀಯ ವಿದ್ಯುನ್ಮಾನ ನಿಗಮದಿಂದ ವಿವಿಎಂ ಮತ್ತು ವಿವಿಪ್ಯಾಟ್ ಪೂರೈಕೆಯಾಗಿದ್ದು, ಅದರಲ್ಲಿ ಬ್ಯಾಲೆಟ್ ಯುನಿಟ್ 1013, ಕಂಟ್ರೋಲ್ ಯುನಿಟ್ 711 ಮತ್ತು ವಿವಿ ಪ್ಯಾಟ್ 768 ಪೂರೈಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನಿಡಿದರು.
ವಿದ್ಯುನ್ಮಾನ ಮತಯಂತ್ರಗಳ ಪರಿಶೀಲನಾ ಕಾರ್ಯವನ್ನು ಭಾರತೀಯ ವಿದ್ಯುನ್ಮಾನ ನಿಗಮದ ಎಂಜಿನಿಯರ್‍ಗಳು ನಡೆಸಿ ಒಂದು ಬ್ಯಾಲೆಟ್ ಯುನಿಟ್ ಮಾತ್ರ ತಿರಸ್ಕøತಗೊಂಡಿತ್ತು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಈ ಸಂಬಂಧ ಫೆಬ್ರವರಿ ಮೊದಲ ವಾರದಲ್ಲಿ ವಿದ್ಯುನ್ಮಾನ ಮತಯಂತ್ರದ ಮೊದಲ ಹಂತದ ಪರಿಶೀಲನಾ ಕಾರ್ಯ ಕೈಗೊಳ್ಳಲಾಗಿತ್ತು. ಅದರಂತೆ 1011 ಬ್ಯಾಲೆಟ್ ಯೂನಿಟ್ ಸರಿಯಾಗಿದ್ದು, ಒಂದು ತಿರಸ್ಕೃತಗೊಂಡಿದೆ. 704 ಕಂಟ್ರೋಲ್ ಯುನಿಟ್ ಸರಿಯಾಗಿದ್ದು, 7 ತಿರಸ್ಕೃತಗೊಂಡಿದೆ. ಹಾಗೆಯೇ 765 ವಿವಿ ಪ್ಯಾಟ್ ಸರಿಯಾಗಿದ್ದು, 3 ತಿರಸ್ಕೃತಗೊಂಡಿದೆ. ತಿರಸ್ಕೃತಗೊಂಡ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‍ನ್ನು ಹೈದ್ರಾಬಾದ್‍ನ ಭಾರತೀಯ ವಿದ್ಯುನ್ಮಾನ ನಿಗಮಕ್ಕೆ ಹಿಂತಿರುಗಿಸಲಾಗಿದೆ ಎಂದು ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ತರಬೇತಿ ಮತ್ತು ಜಾಗೃತಿ ಕಾರ್ಯಕ್ಕೆ ಶೇ.10 ರಷ್ಟು ವಿವಿಎಂ ಮತ್ತು ವಿವಿಪ್ಯಾಟ್‍ನ್ನು ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ರಾಜಕೀಯ ಪಕ್ಷಗಳ ಪ್ರಮುಖರಾದ ಕೆ.ಎಂ.ಅಪ್ಪಣ್ಣ(ಬಿಜೆಪಿ), ಸದಾ ಮುದ್ದಪ್ಪ(ಕಾಂಗ್ರೆಸ್), ರಮೇಶ್(ಸಿಪಿಐಎಂ), ಪತ್ರಕರ್ತರು ಹಾಗೂ ಇತರರ ಉಪಸ್ಥಿತಿಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆಗೆ ಚಾಲನೆ ದೊರೆಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯತೀಶ್ ಉಳ್ಳಾಲ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಖ್, ಇತರರು ಇದ್ದರು.
ಮತ್ತಷ್ಟು ಮಾಹಿತಿ: ಭಾರತ ಚುನಾವಣಾ ಆಯೋಗವು ಇವಿಎಂ/ ವಿವಿಪ್ಯಾಟ್‍ಗಳ ಕುರಿತು ಜಾಗೃತಿ ಮತ್ತು ಪ್ರಾತ್ಯಕ್ಷಿಕೆ ನೀಡುವುದರ ಮೂಲಕ ಮತದಾರರಲ್ಲಿ/ ನಾಗರಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲು ನಿರ್ದೇಶನ ನೀಡಿರುತ್ತದೆ.
ಇವಿಎಂ/ ವಿವಿಪ್ಯಾಟ್‍ಗಳ ಕುರಿತು ಜಾಗೃತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ಕೆ ಮೊದಲ ಹಂತದ ಪರಿಶೀಲನೆಯಲ್ಲಿ ಉತ್ತಮವಾಗಿರುವ ವಿದ್ಯುನ್ಮಾನ ಮತಯಂತ್ರಗಳನ್ನು ಮಾತ್ರ ಬಳಸಲಾಗುವುದು. ಇವಿಎಂ/ ವಿವಿಪ್ಯಾಟ್‍ಗಳ ಕುರಿತು ಜಾಗೃತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಪ್ರತ್ಯೇಕವಾಗಿ ಭದ್ರತಾ ಕೊಠಡಿಯನ್ನು ಮಾಡಲಾಗಿದೆ.
ಮತದಾರರಲ್ಲಿ / ನಾಗರಿಕರಲ್ಲಿ ಇವಿಎಂ/ ವಿವಿಪ್ಯಾಟ್‍ಗಳ ಕುರಿತು ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮವನ್ನು ಎರಡು ವಿಧಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಇವಿಎಂ ಡೆಮೊಂಸ್ಟ್ರೇಷನ್ ಕೇಂದ್ರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, 208-ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಾದ ತಾಲ್ಲೂಕು ಕಚೇರಿ ವಿರಾಜಪೇಟೆ ಇಲ್ಲಿ ಇವಿಎಂ/ ವಿವಿಪ್ಯಾಟ್‍ಗಳ ಪ್ರಾತ್ಯಕ್ಷಿಕೆ ಕೇಂದ್ರವನ್ನು 2023 ರ ಫೆಬ್ರವರಿ, 21 ರಂದು ಸ್ಥಾಪಿಸಿ ಚಾಲನೆ ನೀಡಲಾಗಿದೆ. ಇವಿಎಂ/ ವಿವಿಪ್ಯಾಟ್‍ಗಳ ಪ್ರಾತ್ಯಕ್ಷಿಕೆ ಕೇಂದ್ರವು ಭಾರತ ಚುನಾವಣಾ ಆಯೋಗವು ಚುನಾವಣೆ ಘೋಷಣೆ ಮಾಡುವ ದಿನಾಂಕದವರೆಗೆ ಇರುತ್ತದೆ. ಈ ಕೇಂದ್ರಕ್ಕೆ ನಾಗರಿಕರು, ಮತದಾರರು ಬಂದು ಮತದಾನ ಮಾಡುವುದರ ಬಗ್ಗೆ ಚುನಾವಣೆ/ ಮತದಾನದಲ್ಲಿ ಭಾಗವಹಿಸಲು ಕೋರಿದೆ.
ಮೊಬೈಲ್ ಡೆಮೊಂಸ್ಟ್ರೇಷನ್ ವ್ಯಾನ್(ಸಂಚಾರಿ ವಾಹನ):-ಕೊಡಗು ಜಿಲ್ಲೆಯ 208 ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಎಲ್ಲಾ 542 ಮತಗಟ್ಟೆಗಳ ವ್ಯಾಪ್ತಿಯಲ್ಲಿಯೂ ಮೊಬೈಲ್ ಡೆಮೋಂಸ್ಟ್ರೇಷನ್ ವ್ಯಾನ್ ಮುಖಾಂತರ ಮತದಾರರಲ್ಲಿ/ ನಾಗರಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡಲಾಗುವುದು. ಮೊಬೈಲ್ ಡೆಮೊಂಸ್ಟ್ರೇಷನ್ ವ್ಯಾನ್‍ಗಳು ಚುನಾವಣೆ ಘೋಷಣೆಯಾಗುವ ವರೆಗೆ ಕಾರ್ಯನಿರ್ವಹಿಸಲಿದೆ ಎಂದರು.
ಇವಿಎಂ/ ವಿವಿಪ್ಯಾಟ್‍ಗಳ ಕುರಿತು ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗೆ ಸಂಬಂಧಿಸಿದಂತೆ, ಡಮ್ಮಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ವಿವರಿಸಿದರು.









