ಮಡಿಕೇರಿ ಫೆ.22 : ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಮಡಿಕೇರಿ ತಾಲೂಕಿನ ಬೋಯಿಕೇರಿ-ಇಬ್ಬನಿವಳವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ “ಆಯುಷ್ ಸೇವಾ ಗ್ರಾಮ” ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಮಕ್ಕಳಿಗೆ ಯೋಗದ ಕುರಿತು ಮಾಹಿತಿ ನೀಡಿದರು ಮತ್ತು ಕೆಲವು ಯೋಗಭ್ಯಾಸಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಪ್ರತಿ ದಿನ ಯೋಗಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ತಿಳಿಸಿದರು.
ಗ್ರಾ.ಪಂ.ಅಧ್ಯಕ್ಷರಾದ ಜಯಣ್ಣ, ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾದೇವಿ, ಶಾಲೆಯ ಮುಖ್ಯೋಪಾಧ್ಯಾಯರಾದ ರಾಜು, ಶಾಲೆಯ ಶಿಕ್ಷಕರು, ಮಡಿಕೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ.ಸರಸ್ವತಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಿಎಚ್‍ಒ, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*