ಮಡಿಕೇರಿ ಫೆ.22 : ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ಸ್ಪರ್ಷಗೊಂಡು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ.
ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್ ಎಂಬುವವರೇ ಮೃತ ದುರ್ದೈವಿ. ಸ್ಥಳೀಯ ಬೆಳೆಗಾರರ ತೋಟವೊಂದರಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ.
ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿದಾಗ ಆಘಾತಕ್ಕೊಳಗಾದ ಅಬ್ರುದ್ದೀನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ಕುಟ್ಟ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*