ಮಡಿಕೇರಿ ಫೆ.22 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ 450 ಹಾಸಿಗೆ ಸಾಮರ್ಥ್ಯದ ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧಿಕಾರಿ ಅವರು ಸಭೆಯಲ್ಲಿ ಹಾಜರಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರ್, ವೈದ್ಯಕೀಯ ಕಾಲೇಜು ಅಧಿಕಾರಿಗಳು ಹಾಗೂ ಕಟ್ಟಡ ಕಾಮಗಾರಿ ನಿರ್ಮಿಸುತ್ತಿರುವ ಕಂಪನಿಯ ಪ್ರತಿನಿಧಿಗಳಿಂದ ಮಾಹಿತಿ ಪಡೆದರು.
ಹಾಲಿ ಬೋಧಕ ಆಸ್ಪತ್ರೆಯ ಮುಖ್ಯ ಕಟ್ಡಡದ ಬಳಿ 8 ಅಂತಸ್ತಿನ 300 ಹಾಸಿಗೆ ಸಾಮಥ್ರ್ಯದ ಕಟ್ಟಡ ಮತ್ತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಬಳಿ 7 ಅಂತಸ್ತಿನ 150 ಹಾಸಿಗೆ ಸಾಮಥ್ರ್ಯದ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಮುಕ್ತಾಯ ದಿನಾಂಕ 18-11-2023 ಆಗಿದ್ದು, ಇಲ್ಲಿಯವರೆಗೆ 95.91 ಕೋಟಿ ಅನುದಾನ ಬಿಡಗಡೆಯಾಗಿದೆ. ಹೆಚ್ಚುವರಿಯಾಗಿ 39.09 ಕೋಟಿ ಅನುದಾನ ಬಿಡುಗಡೆ ಆಗಬೇಕಿದೆ. ಹಾಗೂ ಎರಡನೇ ಹಂತದಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳಿಗೆ ಪ್ರಸ್ತಾವನೆಯನ್ನು ಮುಖ್ಯ ಎಂಜಿನಿಯರ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ ಗೌಡ ಅವರು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಮಾರ್ಚ್ ಮಾಹೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಆಗಮಿಸುವ ನಿರೀಕ್ಷೆ ಇದ್ದು, ಈ ಸಂದರ್ಭದಲ್ಲಿ 150 ಹಾಸಿಗೆ ಸಾಮಥ್ರ್ಯದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡವನ್ನು ಮಾರ್ಚ್ 17 ರೊಳಗೆ ಮುಕ್ತಾಯಗೊಳಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಈ ಕಟ್ಟಡದ ಕಾಮಗಾರಿ ಶೇ.90 ರಷ್ಟು ಪೂರ್ಣಗೊಂಡಿದ್ದು, ಕಟ್ಟಡ ಕಾಮಗಾರಿ ಅಂತಿಮ ಹಂತದಲ್ಲಿದ್ದು ನೀರು, ವಿದ್ಯುತ್ ಒದಗಿಸಲಾಗಿದ್ದು, ಸುಣ್ಣ ಬಣ್ಣದ ಕಾಮಗಾರಿಯನ್ನು 1 ವಾರದೊಳಗೆ ಪೂರ್ಣಗೊಳಿಸುವುದಾಗಿ ಸಂಬಂಧಪಟ್ಟ ಗುತ್ತಿಗೆದಾರರು ಮಾಹಿತಿ ಒದಗಿಸಿದರು.
ಸಭೆಯಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕಾರದ ಡಾ.ಕಳ್ಳಿಚಂಡ ಕಾರ್ಯಪ್ಪ, ಮುಖ್ಯ ಆಡಳಿತಾಧಿಕಾರಿ ಸ್ವಾಮಿ ಎ.ಎಲ್, ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್ ಗೋಪಾಲ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಂಜುಂಡಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್ ವಿ.ಎಸ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನರಸಿಂಹಮೂರ್ತಿ, ಸಹಾಯಕ ಅಭಿಯಂತರಾದ ರಾಜೇಶ್, ರಾಮಕೃಷಿ ಕಟ್ಟಡ ನಿರ್ಮಾಣ ಗುತ್ತಿಗೆದಾರರ ಪ್ರತಿನಿಧಿಗಳಾದ ಹೇಮಂತ್, ಗಿರೀಶ್ ಅವರು ಹಾಜರಿದ್ದರು.
Breaking News
- *ನಾಗರಹೊಳೆಯಲ್ಲಿ ಬೇಟೆ : ಕೊಡಗಿನ ಆರೋಪಿಗಳ ಬಂಧನ*
- *ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ : ಆರೋಪಿಗಳ ಬಂಧನ*
- *ಸಾಮಾನ್ಯ ವರ್ಗಕ್ಕೆ ಸಹಾಯವಾಗದ ಬಜೆಟ್*
- *ಸ್ವಾವಲಂಬಿ ಭಾರತಕ್ಕೆ ಪೂರಕವಾದ ಜನಪರ ಬಜೆಟ್*
- *ದೆಹಲಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಜೆಟ್*
- *ಮಡಿಕೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ : ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರ ಕೊಡುಗೆ ಅಪಾರ : ಬಿ.ಸಿ.ಶಂಕರಯ್ಯ*
- *ವಿರಾಜಪೇಟೆ : ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು : ಅನೂಪ್ ಮಾದಪ್ಪ ಕರೆ*
- *ದೀಪ್ತಿ ದೇಚಮ್ಮ ಗೆ ಪಿ.ಹೆಚ್.ಡಿ ಪದವಿ ಪ್ರದಾನ*
- *ಜನಪರ ಮತ್ತು ರೈತಪರ ಬಜೆಟ್ : ತೇಲಪಂಡ ಶಿವಕುಮಾರ್ ನಾಣಯ್ಯ*
- *ರಾಜ್ಯದ ಹಿತಕ್ಕೆ ನಿರಾಶದಾಯಕ ಬಜೆಟ್ : ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ*