ಮಡಿಕೇರಿ ಫೆ.22 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ಫೆ.25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
ಮಡಿಕೇರಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ಮೈಸೂರು ಸುಯೋಗ್ ಆಸ್ಪತ್ರೆಯ ಹೃದಯ ತಜ್ಞರು, ಸ್ತ್ರೀರೋಗ ತಜ್ಞರು, ಫಿಜಿಷಿಯನ್ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ. ಇಕೊ ಪರೀಕ್ಷೆ, ಇಸಿಜಿ, ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆಗಳು ನಡೆಯಲಿವೆ.
ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಬೆಳಿಗ್ಗೆ 10.30 ಗಂಟೆಗೆ ಕೆಪಿಸಿಸಿ ಪ್ರಮುಖರು, ಹೈಕೋರ್ಟಿನ ನಿಕಟಪೂರ್ವ ಅಭಿಯೋಜಕ ಹೆಚ್.ಎಸ್.ಚಂದ್ರಮೌಳಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪಂಡ.ಪಿ.ಸುನಿಲ್ ಸುಬ್ರಮಣಿ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಕನ್ನಂಡ ಕವಿತ, ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ವಿ.ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.