ಮಡಿಕೇರಿ ಫೆ.22 : ಕೊಡಗು ಜಿಲ್ಲಾಡಳಿತ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ(ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ)ಗಳ ಸಹಯೋಗದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಅಡಿಯಲ್ಲಿ ಫೆಬ್ರವರಿ, 28 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸೋಮವಾರಪೇಟೆ ತಾಲ್ಲೂಕಿನ ಸಂತ ಜೋಸೆಫರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ ಕ್ಕಿಂತ ಕಡಿಮೆ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು.
ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು https://forms.gle/hCmXRX8AqFb9oUHn7 ಗೂಗಲ್ ಲಿಂಕ್/ ಕ್ಯೂಆರ್ ಕೋಡ್ ಬಳಸಿಕೊಂಡು ನೋಂದಾಯಿಸಿಕೊಳ್ಳುವುದು. ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳದ ಅಭ್ಯರ್ಥಿಗಳು ಉದ್ಯೋಗಮೇಳ ನಡೆಯುವ ಸ್ಥಳದಲ್ಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಉದ್ಯೋಗಾಕಾಂಕ್ಷಿಗಳ ನೋಂದಣಿ ಹಾಗೂ ಸಂದರ್ಶನ ಉಚಿತವಾಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 10 ಸ್ವಯಂ ವಿವರ(ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ವಿ ಕೇರ್ ಸೂಪರ್ ಸ್ಪೆಷಾಲಿಟಿ ದಂತ ಚಿಕಿತ್ಸಾ ಕೇಂದ್ರ ಉದ್ಘಾಟನೆ*
- *ಪುತ್ತೂರು : ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ತಾಂತ್ರಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ*
- *ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ*
- *ಎಸ್.ಕೆ.ಎಸ್.ಎಸ್.ಎಫ್ ಕೊಡಗು ಜಿಲ್ಲಾಮಟ್ಟದ ಕಲೋತ್ಸವ : ಸಿದ್ದಾಪುರ ವಲಯ ಚಾಂಪಿಯನ್*
- *ಸುಂಟಿಕೊಪ್ಪ : ಬೀದಿ ನಾಟಕದ ಮೂಲಕ ಹೆಚ್ಐವಿ ಕುರಿತು ಜಾಗೃತಿ*
- *ಸಹಾಯಧನಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಫೆಲೋಶಿಪ್ ಮತ್ತು ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ*
- *ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ : ಅರ್ಜಿ ಆಹ್ವಾನ*
- *ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ*
- *ದುಬಾರೆಗೆ ವಾರ್ಷಿಕ 4ಲಕ್ಷ ಪ್ರವಾಸಿಗರ ಆಗಮನ : ಹೈಟೆಕ್ ಶೌಚಾಲಯ ಉದ್ಘಾಟನೆ*