ಶನಿವಾರಸಂತೆ ಫೆ.23 : ಶನಿವಾರಸಂತೆ ಗ್ರಾ.ಪಂ ಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಕೆಡಿಪಿ ಸಭೆಯು ಗ್ರಾ.ಪಂ ಅಧ್ಯಕ್ಷೆ ಫರ್ಜಾನ್ ಶಾಹಿದ್ ಖಾನ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಗ್ರಾ.ಪಂ ವತಿಯಿಂದ ಹಮ್ಮಿಕೊಳ್ಳುವ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಸರಕಾರದ ಕಾರ್ಯಕ್ರಮಗಳ ಅನುಷ್ಠಾನ ಇನ್ನಿತ್ತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಭಾಗವಹಿಸಿದ ಅಧಿಕಾರಿಗಳು ಕಾರ್ಯಕ್ರಮಗಳ ಕುರಿತು ಮಾಹಿತಿ ಮತ್ತು ಸಲಹೆ ನೀಡಿದರು. ಸಭೆಯಲ್ಲಿ ಭಾಗವಹಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕುರಿತು ಮತ್ತು ಹತ್ತನೇ ತರಗತಿ ಪರೀಕ್ಷೆಯಲ್ಲಿ ಪ್ರತಿ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ತಂದುಕೊಡುವ ನಿಟ್ಟಿನಲ್ಲಿ ಶಿಕ್ಷಕರನ್ನು ಪ್ರೋತ್ಸಾಹಿಸುವಂತೆ ಅಧಿಕಾರಿಗಳಿಗೆ ಸದಸ್ಯರು ಸಲಹೆ ನೀಡಿದರು. ಸೆಸ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಉತ್ತಮವಾಗಿ ಸ್ಪಂದಿಸುವಂತೆ ಸದಸ್ಯರು ಸಲಹೆ ನೀಡಿದರು. ಎಸ್‌ಸಿ ಮತ್ತು ಎಸ್‌ಟಿ ಪಲಾನುಭವಿಗಳ ಮನೆಗೆ ತಿಂಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದ್ದು, ಈ ಸಂಬಂಧ ಫಲಾನುಭವಿಗಳು ದಾಖಲೆಗಳನ್ನು ಕಚೇರಿಗೆ ತಲುಪಿಸುವಂತೆ ಸೆಸ್ಕ್ ಅಧಿಕಾರಿ ಹೇಮಂತ್ ಮಾಹಿತಿ ನೀಡಿದರು.
ಸಭೆಯಲ್ಲಿ ಜಿ.ಪಂ ಇಂಜಿನಿಯರ್ ಸಲೀಂ, ಭೂ ಮಾಪನ ಇಲಾಖೆ ಅಧಿಕಾರಿ ಮಹೇಶ್, ಶಿಕ್ಷಣ ಇಲಾಖೆ ಅಧಿಕಾರಿ ವಿಶ್ವನಾಥ್, ಸಿಡಿಪಿಒ ಅಣ್ಣಯ್ಯ, ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ಅಂಗನವಾಡಿ ಶಿಕ್ಷಕಿಯರು ಹಾಜರಿದ್ದು, ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ.ಉಪಾಧ್ಯಕ್ಷ ಎಸ್.ಆರ್.ಮಧು, ಸದಸ್ಯರಾದ ಎಸ್.ಎನ್.ರಘು, ಸರ್ದಾರ್ ಅಹಮ್ಮದ್, ಸರೋಜ ಶೇಖರ್, ಎನ್.ಎ.ಆದಿತ್ಯಗೌಡ, ಸರಸ್ವತಿ, ಕಾವೇರಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮೇದಪ್ಪ, ಕಾರ್ಯದರ್ಶಿ ದೇವರಾಜ್ ಗ್ರಾ.ಪಂ.ಸಿಬ್ಬಂದಿ ಹಾಜರಿದ್ದರು.
ವರದಿ : ದಿನೇಶ್ ಮಾಲಂಬಿ (ಶನಿವಾರಸಂತೆ)