ಮಡಿಕೇರಿ ಫೆ.23 : ಚೆಟ್ಟಳ್ಳಿ ಸಮೀಪದ ಪೊನ್ನತ್ಮೊಟ್ಟೆಯ ಕೂರ್ಗ್ ಹಂಟರ್ಸ್ ಯುವಕರ ಸಂಘದ ವತಿಯಿಂದ 2ನೇ ವರ್ಷದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ ಮಾ.3 ರಿಂದ 5 ವರೆಗೆ ಪೊನ್ನತ್ಮೊಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕೂರ್ಗ್ ಹಂಟರ್ಸ್ ಯುವಕ ಸಂಘದ ಕಾರ್ಯದರ್ಶಿ ಉನೈಸ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಫೆಬ್ರವರಿ 27 ತಂಡಗಳ ನೋಂದಣಿಗೆ ಕೊನೆಯ ದಿನವಾಗಿದೆ.
ಮೊದಲು ನೋಂದಾಯಿತ 50 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು.
ರೂ.1500 ಮುಂಗಡ ಹಣ ಪಾವತಿಸಿ ನೋಂದಣಿ ಮಾಡಿಕೊಂಡ ತಂಡಗಳನ್ನು ಮಾತ್ರ ಟೈಸ್ ಪ್ರಕಿಯೆಯಲ್ಲಿ ಪರಿಗಣಿಸುವುದು. ಪ್ರಥಮ ಬಹುಮಾನ ರೂ.50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ.30 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಅಲ್ಲದೇ, ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ.
ಮೈದಾನ ಪ್ರವೇಶ ಶುಲ್ಕ ರೂ.3000 ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ ಉನೈಸ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 7022368775,9611251311, 9448792008 ಸಂಪರ್ಕಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*