ಮಡಿಕೇರಿ ಫೆ.23 : ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ ಮಡಿಕೇರಿ, ಪುರಸಭೆ ಕುಶಾಲನಗರ, ಪುರಸಭೆ ವಿರಾಜಪೇಟೆ ಹಾಗೂ ಪಟ್ಟಣ ಪಂಚಾಯಿತಿ ಸೋಮವಾರಪೇಟೆಯಲ್ಲಿ ಇರುವ ಪೌರ ಕಾರ್ಮಿಕರು, ಲೋಡರ್ ಹಾಗೂ ಕ್ಲೀನರ್ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಲುವಾಗಿ ಈಗಾಗಲೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ, ಯೋಜನಾ ನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಹಾಗೂ ಕಚೇರಿ ವೆಬ್ ಸೈಟ್‌ಗಳಲ್ಲಿ ಪ್ರಕಟಿಸಲಾಗಿದೆ. ಸದರಿ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆ ಇದ್ದಲ್ಲಿ ದಿನಾಂಕ:22-02-2023 ರಿಂದ 7 ದಿನದೊಳಗಾಗಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿ ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿಗೆ ದಾಖಲಾತಿಗಳೊಂದಿಗೆ ಸಲ್ಲಿಸಬಹುದೆಂದು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ, ಯೋಜನಾ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*