ಮಡಿಕೇರಿ ಫೆ.22 : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಂಡಿಸಿರುವ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ಯಾವುದೇ ಕೊಡುಗೆಯನ್ನು ನೀಡಿಲ್ಲವೆಂದು ಆರೋಪಿಸಿರುವ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಬಜೆಟ್ ಕುರಿತು ಚರ್ಚಿಸಲು ಪಕ್ಷದ ಫೇಸ್ ಬುಕ್ ಪೇಜ್ ನಲ್ಲಿ ಫೆ.26 ರಂದು ಬೆಳಗ್ಗೆ 10 ಗಂಟೆಗೆ ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನೇರಪ್ರಸಾರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿರುವ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ಯಾವುದೇ ರೀತಿಯ ಯೋಜನೆ ಬಂದಿಲ್ಲ. ಕಳೆದ ವರ್ಷದ ಬಜೆಟ್ ನಲ್ಲಿ ಕೊಡ ಕೇಂದ್ರದಿಂದ ಜಿಲ್ಲೆಗೆ ಹಣ ಬಿಡುಗಡೆಯಾಗಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿಗಳು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ರಸ್ತೆ ಅಭಿವೃದ್ಧಿಗೆಂದು ಕೇವಲ 100 ಕೋಟಿ ರೂ.ಗಳನ್ನು ನೀಡಲಾಗಿದೆ. ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾಳಜಿ ತೋರಿಲ್ಲ.
ಕಳೆದ ವರ್ಷ ಮಂಡಿಸಿದ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ವಿಶ್ವ ವಿದ್ಯಾನಿಲಯ ಸ್ಥಾಪನೆ ಘೋಷಣೆ ಮಾಡಿದ್ದರು, ಅದು ಇನ್ನೂ ಅನುಷ್ಠಾನಗೊಂಡಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಿಲ್ಲ. ಜಿಲ್ಲೆಯ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸರ್ಕಾರಕ್ಕೆ ಚಿಂತನೆ ಇಲ್ಲದಂತಾಗಿದೆ. ಕೊಡಗು ಜಿಲ್ಲೆಯನ್ನು ನಿರಂತರವಾಗಿ ಕಡೆಗಣಿಸುತ್ತಲೇ ಬರಲಾಗುತ್ತಿದೆ ಎಂದು ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ.
ಭಾನುವಾರದ ನೇರಪ್ರಸಾರದಲ್ಲಿ ವಿಶ್ವ ವಿದ್ಯಾನಿಲಯ ಸ್ಥಾಪನೆ ಕುರಿತು ಕೂಡ ಚರ್ಚೆ ನಡೆಯಲಿರುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*