ಮಡಿಕೇರಿ ಫೆ.23 : ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಲೈನ್ ಮನೆಗಳಲ್ಲಿ ವಾಸವಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ಸರಕಾರ ನಿವೇಶನ ಹಂಚಿಕೆ ಮಾಡದಿದ್ದಲ್ಲಿ ನಿವೇಶನ ರಹಿತ ಮೊಗೇರ ಜನಾಂಗದವರು ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಮುದ್ದ ಕಳಲ ಯುವಕ ಸಂಘದ ಅಧ್ಯಕ್ಷ ಜ್ಯೋತಿಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ ಸ್ವಂತ ಸೂರು ಇಲ್ಲದೆ ಸಂಕಷ್ಟದಲ್ಲಿ ಕಾಫಿ ತೋಟದ ಲೈನ್ ಮನೆಗಳಲ್ಲಿ ವಾಸ ಮಾಡಬೇಕಾದ ದುಸ್ಥಿತಿ ಬಂದೊದಗಿದೆ. ಜಿಲ್ಲೆಯ ಲೈನ್ ಮನೆಗಳಲ್ಲಿ ವಾಸವಿರುವ ಸುಮಾರು 1500 ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳು ನಿವೇಶದಿಂದ ವಂಚಿತರಾಗಿದ್ದಾರೆ. ಆದರೆ ಸರಕಾರ ಬಡ ಕುಟುಂಬಗಳಿಗೆ ನಿವೇಶನ ನೀಡದೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಏಕರೆಗಟ್ಟಲೆ ಭೂಮಿ ನೀಡಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರಕಾರಿ ಭೂಮಿಯನ್ನು ತೆರವುಗೊಳಿಸಿ ನಿವೇಶನ ರಹಿತ ಬಡ ಕುಟುಂಬಗಳಿಗೆ ಹಂಚಿಕೆ ಮಾಡುವ ಬದಲು ಒತ್ತುವರಿದಾರರಿಗೇ ನೀಡಲು ಮುಂದಾಗಿರುವ ಕ್ರಮ ಖಂಡನೀಯ ಎಂದು ತಿಳಿಸಿರುವ ಜ್ಯೋತಿಕುಮಾರ್, ಪೈಸಾರಿ ಭೂಮಿ ಉಳ್ಳವರ ಪಾಲಾದರೆ ನಿವೇಶನ ರಹಿತರ ಗತಿ ಏನು ಎಂದು ಪ್ರಶ್ನಿಸಿದ್ದಾರೆ.
ಸರ್ಕಾರ ತಕ್ಷಣ ತೋಟದ ಲೈನ್‍ಮನೆಗಳಲ್ಲಿ ವಾಸವಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಬೇಕು. ತಪ್ಪಿದಲ್ಲಿ ಮುದ್ದ ಕಳಲ ಯುವಕ ಸಂಘದ ವತಿಯಿಂದ ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ನಿವೇಶನ ರಹಿತರ ಬೃಹತ್ ಹೋರಾಟ ನಡೆಸಲಾಗುವುದು ಮತ್ತು ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಂದು ಎಚ್ಚರಿಕೆ ನೀಡಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*