ಮಡಿಕೇರಿ ಫೆ.23 : ಜಿಲ್ಲಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ರವರ ಉಲ್ಲೇಖಿತ ಪತ್ರದಲ್ಲಿ ಸೂಚಿಸಿರುವಂತೆ ಜಿಲ್ಲೆಯಲ್ಲಿರುವ ಅನುಪಯುಕ್ತ ಸರ್ಕಾರಿ ವಾಹನಗಳನ್ನು ಮಾರ್ಚ್, 7 ರಂದು ಬೆಳಗ್ಗೆ 11 ಗಂಟೆಗೆ ಅಬಕಾರಿ ಉಪ ಅಧೀಕ್ಷಕರು, ಮಡಿಕೇರಿ ಉಪ ವಿಭಾಗ, ಮಡಿಕೇರಿ ಇವರನ್ನು ಹರಾಜು ನಿರ್ವಾಹಣಾಧಿಕಾರಿಯನ್ನಾಗಿ ನಿಯೋಜಿಸಿ ಟೆಂಡರ್ ಕಂ ಹರಾಜಿನ ಮೂಲಕ ಷರತ್ತುಗೊಳಪಟ್ಟು ವಿಲೇವಾರಿ ಮಾಡುವವರೇ ಹರಾಜು ಪ್ರಕಟಣೆ ಹೊರಡಿಸಲಾಗಿದೆ.
ಮಾರ್ಚ್, 7 ರಂದು ಬೆಳಗ್ಗೆ 11 ಗಂಟೆಗೆ ಅಬಕಾರಿ ಉಪ ಅಧೀಕ್ಷಕರು, ಮಡಿಕೇರಿ ಉಪ ವಿಭಾಗ, ಮಡಿಕೇರಿ ಇವರ ಕಚೇರಿ ಆವರಣದಲ್ಲಿ ಅನುಪಯುಕ್ತ ಸರ್ಕಾರಿ ವಾಹನಗಳ ಹರಾಜು ಪ್ರಕ್ರಿಯೆ ನಡೆಯಲಿದೆ. ಆದ್ದರಿಂದ ನಿಗದಿತ ಸಮಯದಲ್ಲಿ ನಿಗದಿಪಡಿಸಿದ ಮುಂಗಡ ಠೇವಣಿಯನ್ನು ಸರ್ಕಾರಕ್ಕೆ ಸಂದಾಯ ಮಾಡಿ ಈ ಟೆಂಡರ್ ಕಮ್ ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ನಗರದ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ.















