ಮಡಿಕೇರಿ ಫೆ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಸವಿತಾ ಮಹರ್ಷಿ ಜಯಂತಿ’ ಕಾರ್ಯಕ್ರಮವು ಫೆಬ್ರವರಿ, 27 ರಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಶ್ರೀ ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷರಾದ ದೊರೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.