ಮಡಿಕೇರಿ ಫೆ.23 : ಚುನಾವಣಾ ಆಯೋಗದ ನಿರ್ದೇಶನದಂತೆ ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆಯನ್ನು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಸುವಂತೆ ಸೆಕ್ಟರ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆಕ್ಟರ್ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ತಮ್ಮ ಮತಗಟ್ಟೆ ವ್ಯಾಪ್ತಿಯ ಶಾಲಾ, ಕಾಲೇಜು, ಸಮುದಾಯ ಭವನಗಳಲ್ಲಿ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಿ ವಿದ್ಯುನ್ಮಾನ ಮತಯಂತ್ರ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಸ್ಥಳೀಯ ಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರಿಗೆ ಅಣಕು ಮತದಾನಕ್ಕೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ತರಬೇತಿ ಮತ್ತು ಜಾಗೃತಿಗೆ ಬಳಸುವ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್‍ನ್ನು ತೆಗೆದುಕೊಂಡು ಹೋಗುವಾಗ ಮತ್ತು ಬರುವಾರ ಪೊಲೀಸ್ ಸೆಕ್ಟರ್ ಅಧಿಕಾರಿಗಳ ಭದ್ರತೆ ಪಡೆಯುವಂತೆ ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್, ಶಬಾನಾ ಎಂ.ಶೇಖ್, ತಹಶೀಲ್ದಾರರು, ಸೆಕ್ಟರ್ ಅಧಿಕಾರಿಗಳು ಇತರರು ಇದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*