ವಿರಾಜಪೇಟೆ ಫೆ.24 : ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್.ಸಿ.ಸಿ ಘಟಕ, ಇಕೋ ಕ್ಲಬ್ ಹಾಗೂ ಸ್ಕೌಟ್ ಗೈಡ್ಸ್ ಘಟಕಗಳ ಸಹಯೋಗದಲ್ಲಿ ಸೈಕಲ್ ಜಾಥಾ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು.
ಜಾಥಾಕ್ಕೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ನಗರದ ಗಡಿಯಾರ ಕಂಬದ ಬಳಿ ಚಾಲನೆ ನೀಡಿದರು. ಸೈಕಲ್ ಜಾಥವು ಹೆಗ್ಗಳ ಗ್ರಾಮದ ಸ್ನೇಹಭವನ ಅನಾಥಾಶ್ರಮದ ತನಕ ನಡೆಯಿತು.
ಮಾರ್ಗ ಮದ್ಯೆ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ನಡೆಸಿದರು. ಸ್ನೇಹ ಭವನ ಅನಾಥಾಶ್ರಮದಲ್ಲೂ ಸ್ವಚ್ಛತೆಯನ್ನು ನೆರವೇರಿಸಿದರು. ಅಲ್ಲಿಯೇ ಆಹಾರ ತಯಾರಿಸಿ ವೃದ್ಧರಿಗೆ ಬಡಿಸಿದರು. ಮತ್ತು ಮನೋರಂಜನ ಕಾರ್ಯಕ್ರಮ ನೀಡಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ನರ್ಸಿಂಗ್ ಹೋಮ್‍ನ ವೈದ್ಯೆ ಡಾ. ಫಾತಿಮಾ ಕಾರ್ಯಪ್ಪ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಒಟ್ಟು 60 ವಿದ್ಯಾರ್ಥಿಗಳಿದ್ದ ಈ ತಂಡದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆ, ನೈರ್ಮಲ್ಯ ಹಾಗೂ ಇಂಧನ ಉಳಿತಾಯದ ಪ್ರಾಮುಖ್ಯತೆಯನ್ನು ಅರಿತರು.
ಈ ಸಂದರ್ಭ ಎನ್.ಸಿ.ಸಿ ಅಧಿಕಾರಿ ಅಬ್ದುಲ್ ಮುನೀರ್, ಸ್ಕೌಟ್ ಗೈಡ್ ಸಂಚಾಲಕಿ ಸಹನ ಹಾಗೂ ಶಿಕ್ಷಕರುಗಳು ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*