ಮಡಿಕೇರಿ ಫೆ.24 : ಕಳೆದ ಮೂರೂವರೆ ವರ್ಷಗಳಿಂದ ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಪಕ್ಷದ ಏಳಿಗೆಗಾಗಿ ಶ್ರಮಿಸುತ್ತಿದ್ದೇನೆ. ಪಕ್ಷ ಸಂಘಟನೆಯನ್ನು ಸಹಿಸದ ಕೆಲವರು ತಾನು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತೇನೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಹೆಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ, ಪಕ್ಷದ ಸಿದ್ಧಾಂತಗಳಿಗೆ ಬದ್ಧನಾಗಿದ್ದೇನೆ. ಯಾವುದೇ ಕಾರಣಕ್ಕು ಪಕ್ಷ ಬಿಡುವುದಿಲ್ಲ, ಈ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಬೇಡ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕೆನ್ನುವ ಚಿಂತನೆಯಡಿ ಎಲ್ಲರೂ ಕಾರ್ಯಕರ್ತರಂತೆ ಶ್ರಮವಹಿಸಿ ಜೆಡಿಎಸ್ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ತೊರೆದಿರುವ ಸಂಕೇತ್ ಪೂವಯ್ಯ ಅವರು ಬಿಜೆಪಿಯನ್ನು ಮಣಿಸಲು ಜಾತ್ಯತೀತರೆಲ್ಲ ಒಂದಾಗಿರಬೇಕೆನ್ನುವ ಕಾರಣದಿಂದ ಕಾಂಗ್ರೆಸ್‍ಗೆ ಸೇರ್ಪಡೆಯಾಗಿರುವುದಾಗಿ ಕಾರಣ ನೀಡಿದ್ದಾರೆ. ಕಾಂಗ್ರೆಸ್ ನಲ್ಲಿ ನಿಜವಾದ ಜಾತ್ಯತೀತತೆ ಇದ್ದರೆ ವಿರಾಜಪೇಟೆಯಲ್ಲಿ ಅಲ್ಪಸಂಖ್ಯಾತರು, ಪರಿಶಿಷ್ಟರು ಅಥವಾ ಹಿಂದುಳಿದ ವರ್ಗದವರಿಗೆ ಟಿಕೆಟ್ ನೀಡಿ ಅದನ್ನು ಸಾಬೀತುಪಡಿಸಲಿ. ಸಂಕೇತ್ ಅವರ ನಿರ್ಗಮನ ಬೇಸರ ತಂದಿದೆ, ಜೆಡಿಎಸ್ ಪಕ್ಷ ಅವರಿಗೆ ಎಲ್ಲಾ ಸ್ಥಾನಮಾನಗಳನ್ನು ನೀಡಿ ನಾಯಕತ್ವವನ್ನು ತುಂಬಿತ್ತು ಎಂದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*