ಮಡಿಕೇರಿ ಫೆ.24 : ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ 11 ಅಂಗನವಾಡಿ ಕಾರ್ಯಕರ್ತೆಯರು, 22 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಭೌತಿಕವಾಗಿ (ಆಫ್ ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಅಂಗನವಾಡಿ ಕೇಂದ್ರಗಳಿಗೆ ಅರ್ಜಿಗಳನ್ನು ಭೌತಿಕವಾಗಿ (ಆಫ್-ಲೈನ್) ಮೂಲಕ ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇರುವ ಕೇಂದ್ರದ ಹೆಸರು: ಬೀರುಗ 1, ಮಾಯಾಮುಡಿ 1, ಬೀರುಗ 2, ಮೀನುಪೇಟೆ, ಎಡೂರು, ಹೊಸೂರು, ಕರಡಿಕೊಪ್ಪ, ಕರಡಿಗೋಡು 2, ಬಾಳಾಜಿ 1, ಕಲ್ಲುಕೋರೆ, ಬೆಳ್ಳುಮಾಡು 1.
ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುವ ಕೇಂದ್ರದ ಹೆಸರು: ಕಾಟಿಗುಂಡಿ ಪೈಸಾರಿ, ಬಿ.ಶೆಟ್ಟಿಗೇರಿ, ದೇವನೂರು 2, ತೆರಾಲು 2, ಕುಂದ, ಹೊಸನಲ್ಲಿಕೋಟೆ, ಆಂಗೋಡು, ಹೈಸೋಡ್ಲೂರು, ಬೀರುಗ 1, ಕುಂದೂರು, ಬೆಸಗೂರು 2, ಕಲ್ತೋಡು, ಕಣ್ಣಂಗಾಲ, ಟಿ. ಎಸ್ಟೇಟ್ 2, ತೋತೇರಿ ರುದ್ರಗುಪ್ಪೆ, ಗೋಣಿಕೊಪ್ಪಲು ಮೈನ್,ನೆಹರುನಗರ 1, ಜಾಗಲೆ, ಕಮಟೆ, ಬಿರುನಾಣಿ 1, ಬಿಟ್ಟಂಗಾಲ, ಕೇತುಮೊಟ್ಟೆ.
ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 24 ಕೊನೆಯ ದಿನವಾಗಿದೆ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ಎಸ್ಎಸ್ಎಲ್ಸಿ ತೇರ್ಗಡೆ ಹೊಂದಿರಬೇಕು. 19 ರಿಂದ 35 ವರ್ಷ ವಯೋಮಿತಿಯೊಳಗಿರುವ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
ಅಂಗವಿಕಲ ಅಭ್ಯರ್ಥಿಗಳಿಗೆ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇದೆ. ದೈಹಿಕ ಅಂಗವಿಕಲತೆಯ ಪ್ರಮಾಣವು ಶೇ.40 ಕ್ಕಿಂತ ಅಧಿಕವಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿಯಾದ ಪೊನ್ನಂಪೇಟೆ ಇಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಪೊನ್ನಂಪೇಟೆ ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ 08274-201878, 7795732286 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*