ಮಡಿಕೇರಿ ಫೆ.24 : ಮಡಿಕೇರಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ 1 ಹಾಗೂ ಅಂಗನವಾಡಿ ಸಹಾಯಕಿಯರ 04 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಮುಕ್ಕೋಡ್ಲು-1 ರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ ಬಲ್ಲಮಾವಟಿ ಪಟ್ಟಣ, ವಣಚಲು, ಪೆನ್‍ಷನ್ ಲೈನ್, ಮಂಡೆಸ್ಥಾನ ಇಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್, 24 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆ ಹೊಂದಿರಬೇಕು. 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿದ್ದಾರೆ.
ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಡಿಕೇರಿ ಇಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-295087 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.















