ಮಡಿಕೇರಿ ಫೆ.24 : ಪ್ರಸಕ್ತ (2022-23) ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿದ ಸಾಮಾನ್ಯ ರೈತರಿಗೆ ಶೇ.75ರ ಸಹಾಯಧನ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಶೇ. 90 ರ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆದ್ದರಿಂದ ರೈತರು ಆರ್ಟಿಸಿ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಅರ್ಜಿಯನ್ನು ಸಮೀಪದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆಗೆ ಮುದ್ದಾಂ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಿ ನೋಂದಾಣಿ ಮಾಡಿಕೊಳ್ಳಲು ಕೋರಿದೆ. ಹಾಗೂ ರೈತರ ವಂತಿಕೆಯನ್ನು ಇಲಾಖಾ ಅನುಮೋದಿತ ತಾವು ಆಯ್ಕೆ ಮಾಡಿ ಸಂಬಂಧಪಟ್ಟ ಹನಿ ನೀರಾವರಿ ಕಂಪನಿಗಳಿಗೆ ಸಂದಾಯ ಮಾಡಿ ಇಲಾಖೆಯಿಂದ ಕಾರ್ಯದೇಶ ಪಡೆದು ಈ ಯೋಜನೆಯನ್ನು ತಮ್ಮ ತಾಕುಗಳಲ್ಲಿ ಅಳವಡಿಸಿ ಸಹಾಯಧನ ಪಡೆಯಲು ಸಂಪೂರ್ಣ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಕಚೇರಿಗಳಿಗೆ ಮಾರ್ಚ್, 15 ರೊಳಗೆ ಸಲ್ಲಿಸಿ ಸಹಾಯಧನ ಪಡೆಯುವಂತೆ ತೋಟಗಾರಿಕೆ ಉಪ ನಿರ್ದೇಶಕರಾದ ನಾಯಕ್ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*