ಮಡಿಕೇರಿ ಫೆ.24 : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಸೋಮವಾರಪೇಟೆಯ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ಫೆಬ್ರವರಿ 28 ರಂದು ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ನಡೆಯಲಿದ್ದು, ಇದರ ಸದುಪಯೋಗವನ್ನು ಅರ್ಹರು ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ.ಉಮಾ ಅವರು ತಿಳಿಸಿದ್ದಾರೆ.
ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಪಿಯುಸಿ, ಐಟಿಐ, ಪದವಿ, ಸ್ನಾತಕೋತ್ತರ ಪದವಿ ಮತ್ತು ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.(18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳೆಯರು)/.
ಫೆಬ್ರವರಿ, 28 ರಂದು ಬೆಳಗ್ಗೆ 9.30 ಗಂಟೆಗೆ ಹಾಜರಾಗಿ ನೋಂದಣಿ ಮಾಡಬೇಕು. ಆಧಾರ್ ಕಾರ್ಡ್, 20 ಪ್ರತಿಗಳ ಸ್ವವಿವರದೊಂದಿಗೆ ಹಾಜರಾಗಬೇಕು. ಅಭ್ಯರ್ಥಿಗಳ ಅಂಕಪಟ್ಟಿ ಮತ್ತು ಮೂಲ ದಾಖಲೆಗಳ ಪ್ರತಿಯನ್ನು ಹಾಜರುಪಡಿಸಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಅವರು ತಿಳಿಸಿದರು.
ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್, ಜಸ್ಟ್ ಡಯಲ್, ಕ್ಲಬ್ ಮಹೀಂದ್ರ, ವಕ್ಫ್ ಪೌಂಡೇಷನ್, ಕಾಗೆಂಟ್ ಇ-ಸರ್ವೀಸ್, ಇಬ್ಬನಿ ರೆಸಾರ್ಟ್, ಸೇರಿದಂತೆ 22 ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತೆ ಉಮಾ ಅವರು ಹೇಳಿದರು.
ಶಾಲಾ ಶಿಕ್ಷಣ, ಸಾಕ್ಷರತೆ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಅಶ್ವಥ್ ನಾರಾಯಣ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಸಂತ ಜೋಸೆಫರ ವಿದ್ಯಾಸಂಸ್ಥೆಯ ಸಂಚಾಲಕರಾದ ವಂದನೀಯ ಸ್ವಾಮಿ ಎಂ.ರಾಯಪ್ಪ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ.ಕೆ.ಚಂದ್ರು ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
















