ಮಡಿಕೇರಿ ಫೆ.24 : ಅಕ್ಷರ ದಾಸೋಹದಡಿ ಮಧ್ಯಾಹ್ನದ ಬಿಸಿ ಊಟಕ್ಕೆ ಬಳಸುವ ಆಹಾರ ಪದಾರ್ಥ ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರವಹಿಸಬೇಕು ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ 2022-23 ನೇ ಸಾಲಿನ ಜಿಲ್ಲಾ ವಲಯದ ಇಲಾಖಾ ಕಾರ್ಯಕ್ರಮಗಳ ಜನವರಿ ಅಂತ್ಯದವರೆಗಿನ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ಅವಧಿ ಮೀರಿದ ಆಹಾರ ಪದಾರ್ಥ ದಾಸ್ತಾನು ಮಾಡಬಾರದು ಮತ್ತು ಉಪಯೋಗಿಸದಂತೆ ಮುನ್ನೆಚ್ಚರ ವಹಿಸುವಂತೆ ಅಕ್ಷರ ದಾಸೋಹ ಶಿಕ್ಷಣಾಧಿಕಾರಿಗೆ ಜಿ.ಪಂ.ಸಿಇಒ ಅವರು ತಾಕೀತು ಮಾಡಿದರು.
ಉತ್ತಮ ಗುಣಮಟ್ಟದ ಬೇಳೆ, ಅಕ್ಕಿ, ಎಣ್ಣೆ ಹಾಗೂ ಉತ್ತಮ ತರಕಾರಿ ಇತರ ಆಹಾರ ಪದಾರ್ಥಗಳನ್ನು ಬಳಸಬೇಕು ಎಂದು ಅವರು ಸೂಚಿಸಿದರು.
ಪ್ರಸಕ್ತ ಆರ್ಥಿಕ ವರ್ಷ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳ್ಳುವುದರಿಂದ ಜಿ.ಪಂ.ವತಿಯಿಂದ ಲಿಂಕ್ ಡಾಕ್ಯುಮೆಂಟ್ ಮೂಲಕ ಬಿಡುಗಡೆಯಾಗಿರುವ ಹಣವನ್ನು ಸಮರ್ಪಕವಾಗಿ ಬಳಸಿ, ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ಜಿ.ಪಂ.ಸಿಇಒ ಅವರು ಅವರು ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿ ಊಟ ಯೋಜನೆ, ಅತಿಥಿ ಶಿಕ್ಷಕರಿಗೆ ಕಾಲ ಮಿತಿಯಲ್ಲಿ ವೇತನ ಪಾವತಿಸುವುದು, ವಿವೇಕ ಯೋಜನೆಯಡಿ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಮತ್ತಿತರ ಸಂಬಂಧ ಪ್ರಗತಿ ಸಾಧಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ವಿವೇಕ ಯೋಜನೆಯಡಿ 60 ಕೊಠಡಿಗಳು ನಿರ್ಮಾಣವಾಗುತ್ತಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಮಾಹಿತಿ ನೀಡಿದರು.
ಜಿ.ಪಂ.ಎಂಜಿನಿಯರ್ ವಿಭಾಗಕ್ಕೆ ವಹಿಸಲಾಗಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಆರ್ಥಿಕ ಪ್ರಗತಿ ಸಾಧಿಸುವಂತೆ ಜಿ.ಪಂ.ಸಿಇಒ ಡಾ.ಆಕಾಶ್ ಅವರು ಸೂಚಿಸಿದರು.
ರಸ್ತೆ ಮತ್ತು ಸೇತುವೆಗಳ ನಿರ್ಮಾಣಕ್ಕಾಗಿ 354.72 ಲಕ್ಷ ರೂ. ಒದಗಿಸಲಾಗಿದ್ದು. ಶೇ.50 ರಷ್ಟು ಪ್ರಗತಿ ಸಾಧಿಸಲಾಗಿದೆ. ಆದ್ದರಿಂದ ಆದಷ್ಟು ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಆರ್ಥಿಕ ಪ್ರಗತಿ ಸಾಧಿಸುವಂತೆ ಜಿ.ಪಂ.ಸಿಇಒ ಅವರು ಹೇಳಿದರು.
ಕೆರೆಗಳ ಅಭಿವೃದ್ಧಿ, ವಿವಿಧ ಇಲಾಖೆಗಳ ಕಚೇರಿಗಳ ನಿರ್ವಹಣೆ ಮತ್ತು ದುರಸ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಈಗಾಗಲೇ ಆಗಿರುವ ಕಾಮಗಾರಿ, ಜೊತೆಗೆ ವಿವಿಧ ಯೋಜನೆಗಳು ಸಂಬಂಧ ತ್ವರಿತವಾಗಿ ವರದಿ ನೀಡುವಂತೆ ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಪ್ರಾಥಮಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ಆಸ್ಪತ್ರೆಗಳನ್ನು ಸುವ್ಯವಸ್ಥಿತವಾಗಿ ನಿರ್ವಹಣೆ ಮಾಡುವುದು, ಜೊತೆಗೆ ಜಿಲ್ಲಾ ಆಯುಷ್ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಲಹೆ ಮಾಡಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಕಲ್ಪಿಸುವುದು, ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ವಸತಿ ಶಾಲೆಗಳ ನಿರ್ವಹಣೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಈ ಇಲಾಖೆಗಳಿಗೆ ಜಿ.ಪಂ.ವತಿಯಿಂದ ಅನುದಾನ ನೀಡಲಾಗಿದ್ದು, ಸರಿಯಾಗಿ ವಿನಿಯೋಗಿಸುವಂತೆ ಜಿ.ಪಂ.ಸಿಇಒ ಅವರು ಹೇಳಿದರು.
ಅಲ್ಪಸಂಖ್ಯಾತರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ನಿರ್ವಹಣೆ, ಹೀಗೆ ಹಲವು ಯೋಜನೆಗಳನ್ನು ಪೂರ್ಣಗೊಳಿಸುವಂತೆ ಜಿ.ಪಂ.ಸಿಇಒ ಅವರು ನಿರ್ದೇಶನ ನೀಡಿದರು.
ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ರೇಷ್ಮೆ, ಸಾಮಾಜಿಕ ಅರಣ್ಯ, ಸಹಕಾರ, ಹೀಗೆ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿ ಪ್ರಗತಿ ಸಾಧಿಸುವಂತೆ ಸೂಚಿಸಿದರು.
ಕೈಗಾರಿಕೆ ಮತ್ತು ಕೈಮಗ್ಗ ಇಲಾಖೆಗೆ ಬಿಡುಗಡೆ ಮಾಡಿರುವ ಅನುದಾನ ಸಂಬಂಧ ಸಾಧಿಸಿರುವ ಪ್ರಗತಿ ಬಗ್ಗೆ ವರದಿ ಸಲ್ಲಿಸುವಂತೆ ಜಿ.ಪಂ.ಸಿಇಒ ಅವರು ಸೂಚಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಯೋಜನಾ ನಿರ್ದೇಶಕರಾದ ರಾಜಗೋಪಾಲ್, ಮುಖ್ಯ ಲೆಕ್ಕಾಧಿಕಾರಿ ಝೀವಲ್‍ಖಾನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಯ್ಯ, ಜಿ.ಪಂ. ಇಇ ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಬಿಸಿಎಂ ಇಲಾಖಾ ಅಧಿಕಾರಿ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ನಾಯಕ್, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಸಿ.ಎನ್.ರಘು, ಕೈಮಗ್ಗ ಮತ್ತು ಜವಳಿ ಇಲಾಖೆಯ ಗುರುಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸ್ನೇಹ, ಇತರರು ಹಲವು ಮಾಹಿತಿ ನೀಡಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*