ಮಡಿಕೇರಿ ಫೆ.25 : ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ವತಿಯಿಂದ ಫೆ.26 ರಂದು ಜಿಲ್ಲಾಮಟ್ಟದ ವಕ್ಫ್ ಸಮ್ಮಿಟ್ ಕಾರ್ಯಾಗಾರ ನಡೆಯಲಿದೆ.
ನಗರದ ಕೆಎಸ್‍ಆರ್‍ಟಿಸಿ ಬಸ್‍ನಿಲ್ದಾಣದ ಹಿಂಭಾಗದ ಹೊಟೇಲ್ ದೋಹಕಿಂಗ್ ಸಭಾಂಗಣದಲ್ಲಿ ಅಪರಾಹ್ನ 2.30 ಗಂಟೆಗೆ ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಪಿ.ಎಂ.ಹಕೀಂ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ಜಿಲ್ಲೆಯ ನೋಂದಾಯಿತ ವಕ್ಫ್ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಧರ್ಮ ಗುರುಗಳಿಗೆ ವಕ್ಫ್ ಕಾಯ್ದೆ ಮತ್ತು ವಕ್ಫ್ ಸಂಸ್ಥೆಯಿಂದ ಲಭಿಸುವ ಯೋಜನೆಗಳ ಕುರಿತು ಮಾಹಿತಿ ನೀಡಲಾಗುವುದು.
ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ತು ಸದಸ್ಯ ಎಂ.ಪಿ.ಸುಜಾಕುಶಾಲಪ್ಪ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಸಹಾಯಕ ಖಾಝಿಗಳಾದ ಅಬ್ದುಲ್ಲಾ ಫೈಝಿ ಎಡಪಾಲ ಹಾಗೂ ಶಾದುಲಿ ಫೈಝಿ ಕೊಂಡಂಗೇರಿ ಪ್ರಾರ್ಥನೆ ಹಾಗೂ ಆರ್ಶೀವಚನ ನೀಡಲಿದ್ದು, ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಸದಸ್ಯ ಜಿ.ಯಾಕುಬ್ ಭಾಗವಹಿಸಲಿದ್ದು, ಜಿಲ್ಲೆಯ ಎಲ್ಲಾ ಜಮಾಅತ್‍ನ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಧರ್ಮಗುರುಗಳು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಪಿ.ಎಂ.ಹಕೀಂ ಮನವಿ ಮಾಡಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*