ಶಿವಮೊಗ್ಗ ಫೆ.27 : ಶಿವಮೊಗ್ಗಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿ ಸೋಗಾನೆಯಲ್ಲಿ ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದರು. ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಸ್ಮಾರ್ಟ್ಸಿಟಿ ಕಾಮಗಾರಿ, ಶಿಮುಲ್ ಹಾಲು ಪ್ಯಾಕಿಂಗ್ ಘಟಕ, ಮಾಮ್ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ನೆರವೇರಿಸಿದರು.